ಪರ್ಲಡ್ಕ, ಪುತ್ತೂರು, ಕರ್ನಾಟಕ - 574201
ಸಮಯ
10:00 AM - 6:00 PM

ಬಾಲವನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪುತ್ತೂರು : ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಡಾ| ಶಿವರಾಮ ಕಾರಂತ ಬಾಲವನ ಸಮಿತಿ, ಪುತ್ತೂರು, ಸಹಾಯಕ ಆಯುಕ್ತರ ಕಾರ್ಯಾಲಯ ಪುತ್ತೂರು ತಾಲೂಕು ಇದರ ವತಿಯಿಂದ ಇದರ ವತಿಯಿಂದ ದಿನಾಂಕ 10.04.2022 ರಂದು ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಬಾಲವನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗು ಪುತ್ತೂರು ಸಹಾಯಕ ಆಯುಕ್ತರಾದ ಶ್ರೀ ಗಿರೀಶ್ ನಂದನ್‍ರವರ ಮಾರ್ಗದರ್ಶನದಲ್ಲಿ, ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಶ್ರೀ ಪುರಂಧರ ಭಟ್ ನೇತೃತ್ವದಲ್ಲಿ ಈ ಸ್ವಚ್ಛತಾ ಕಾರ್ಯ ನಡೆಯಿತು. ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಶ್ರೀ ಜಯರಾಮ್ ಕುಲಾಲ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಮುಕ್ವೆ, ಕೋಶಾಧಿಕಾರಿ ಶ್ರೀ ಈಶ್ವರ ನಾಯ್ಕ, ಉಪಾಧ್ಯಕ್ಷ ಶ್ರೀ ಮೋಹನ್ ಆಚಾರ್ಯ ಸಹಿತ 30ಕ್ಕೂ ಅಧಿಕ ಕಟ್ಟಡ ಕಾರ್ಮಿಕ ಸಂಘದ ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು. ಬಾಲವನದ ಕಾರ್ಯಕ್ರಮ ಸಂಯೋಜಕ ಶ್ರೀ ಜಗನ್ನಾಥ ಅರಿಯಡ್ಕ ವ್ಯವಸ್ಥೆಗೊಳಿಸಿದರು, ಅಶೋಕ್ ಸಹಕರಿಸಿದರು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಉಪಾಹಾರದ ವ್ಯವಸ್ಥೆಯನ್ನು ಮಾಡಲಾಯಿತು.