ಡಾ.ಶಿವರಾಮ ಕಾರಂತರ ಬಾಲವನದಲ್ಲಿ ನಡೆಯುವ ಈ ವಾರದ ಕಾರ್ಯಕ್ರಮ ದಿನಾಂಕ: 28.08.2020. ಶುಕ್ರವಾರ ಪೂರ್ವಾಹ್ನ 11.00 ಗಂಟೆಗೆ ಆನ್ ಲೈನ್ ಮೂಲಕ ನಡೆಯಲಿದೆ. ಈ ವಾರದ ಕಾರ್ಯಕ್ರಮದಲ್ಲಿ ಹಿರಿಯ ಪರಿಸರ ತಜ್ಞ, ನಿವೃತ್ತ ಪ್ರಾಧ್ಯಾಪಕ ಹಾಗೂ ಬಾಲವನದಲ್ಲಿನ ಜೀವ ವೈವಿಧ್ಯಗಳ ಬಗ್ಗೆ ಅಧ್ಯಯನ ನಡೆಸಿದ ಡಾ.ದೇವಿಪ್ರಸಾದ ಕೆ.ಎನ್ ಇವರು ಬಾಲವನದ ಜೀವ ವೈವಿಧ್ಯ ಎನ್ನುವ ವಿಷಯದ ಬಗ್ಗೆ ಮಾತನಾಡುತ್ತಾರೆ. ಈ ಕಾರ್ಯಕ್ರಮ ಡಾ.ಶಿವರಾಮ ಕಾರಂತರ ಬಾಲವನ ಫೇಸ್ ಬುಕ್, ಯೂಟ್ಯೂಬ್, ಬಾಲವನದ ಎಲ್ಲಾ ವಾಟ್ಸ್ ಆಪ್ ಗ್ರೂಪ್, ಪುತ್ತೂರು ಸುದ್ದಿ ಮಲ್ಟಿಮೀಡಿಯಾ ಚಾನೆಲ್ ಮತ್ತು ಗ್ರೂಪ್, ಸ್ಥಳೀಯ ದೃಶ್ಯ ಮಾದ್ಯಮಗಳ ಮೂಲಕ ಪ್ರಸಾರಗೊಳ್ಳಲಿದೆ. ಪುತ್ತೂರಿನ ಪತ್ರಕರ್ತರು, ತಾಲೂಕು ಪತ್ರಕರ್ತರ ಸಂಘ, ವಿಭಾ ಟೆಕ್ನಾಲಜಿ ಹಾಗೂ ಸಿಟಿವಿ ಕೇಬಲ್ ನೆಟ್ವರ್ಕ್ನವರು ಕಾರ್ಯಕ್ರಮಕ್ಕೆ ಸಹಕರಿಸಲಿದ್ದಾರೆ. ನೀವೂ ವೀಕ್ಷಿಸುವಂತೆ ಕೋರುತ್ತೇವೆ.